ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 22 ಮೇ
ಆರ್ಥೊಡಾಕ್ಸ್ ಪಂಚಾಂಗ · ಮೇ 9 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಮೇ 2027
ಶನಿವಾರ · ಪಾಸ್ಕದ ಮೂರನೆಯ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Prophet Isaiah (8th C BC)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಪ್ರಾರ್ಥನೆ: ಸುವಾರ್ತೆ (ಸಂತ ನಿಕೋಲಸ್)
1“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ. 2ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು. 3ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ. 4ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ. 5ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ. 6ಈ ಸಾಮ್ಯವನ್ನು ಯೇಸು ಅವರಿಗೆ ಹೇಳಿದನು. ಆದರೂ ಆತನು ಹೇಳಿದ ವಿಷಯಗಳ ಅರ್ಥ ಏನೆಂಬುದು ಅವರು ಗ್ರಹಿಸಲಿಲ್ಲ. 7ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ, 8ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ. 9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
ಪತ್ರಿಕೆ
19ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು. 20ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು. 21ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು. 22ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು. 23ಅನೇಕ ದಿನಗಳು ಕಳೆದ ಮೇಲೆ, ಯೆಹೂದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. 24ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು. 25ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು. 26ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು. 27ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು. 28ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು. 29ಮತ್ತು ಗ್ರೀಕ್ ಭಾಷೆಯನ್ನಾಡುವ ಯೆಹೂದ್ಯರ ಸಂಗಡ ಮಾತನಾಡಿ ತರ್ಕಮಾಡುತ್ತಿದ್ದನು. ಆದರೆ ಅವರು ಅವನನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡುತ್ತಿದ್ದರು. 30ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. 31ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.
ಪತ್ರಿಕೆ (ಸಂತ ನಿಕೋಲಸ್)
17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. 19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ. 20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
ಸುವಾರ್ತೆ
17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ. 18“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ. 19ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ. 20ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು. 21ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು. 22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ. 23ನನ್ನನ್ನು ದ್ವೇಷಿಸುವವನು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾನೆ. 24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ 25‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು. 26ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು. 27ನೀವು ಮೊದಲಿನಿಂದ ನನ್ನ ಸಂಗಡ ಇದ್ದುದರಿಂದ ನೀವೂ ಸಹ ನನಗೆ ಸಾಕ್ಷಿಗಳಾಗಿದ್ದೀರಿ. 16:1“ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. 2ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
ಸುವಾರ್ತೆ (ಸಂತ ನಿಕೋಲಸ್)
17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಮೇ ಎಂದರೆ ನಾಗರಿಕ ಪಂಚಾಂಗದ 22 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು