ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 23 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಮೇ 2027
ಭಾನುವಾರ · ಸಾಮಾನ್ಯ ಕಾಲದ ಎಂಟನೆಯ ವಾರ
ಹಬ್ಬಗಳು ಮತ್ತು ಸಂತರು
ಅತಿಪವಿತ್ರ ತ್ರಿಯೇಕತ್ವ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
32ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ. 33ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ? 34ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ. 39ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು. 40ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
ಪ್ರತಿವಚನ ಕೀರ್ತನೆ
4ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 6ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು. 9ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. 18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ಎರಡನೆಯ ವಾಚನ
14ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. 15ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. 16ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. 17ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ಸುವಾರ್ತೆ
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು