ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 24 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಮೇ 2027
ಸೋಮವಾರ · ಸಾಮಾನ್ಯ ಕಾಲದ ಎಂಟನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಎಂಟನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. 2ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. 5ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ 6ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. 7ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ
ಸುವಾರ್ತೆ
17ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. 18ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. 19ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. 20ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು, 21ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 22ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು. 23ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು. 24ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. 26ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 27ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು