ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 25 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಮೇ 2027
ಮಂಗಳವಾರ · ಸಾಮಾನ್ಯ ಕಾಲದ ಎಂಟನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಎಂಟನೆಯ ವಾರದ ಮಂಗಳವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಪೂಜ್ಯ ಸಂತ ಬೀಡ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ
ಸಂತ ಗ್ರೆಗೊರಿ VII, ಪೋಪ್ · ಐಚ್ಛಿಕ ಸ್ಮರಣೆ
ಸಂತ ಮೇರಿ ಮಗ್ದಲೇನ್ ಡಿ ಪಾಜ್ಜಿ, ಕನ್ಯೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
5“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ. 6ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ 7ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ. 8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ. 14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ. 23ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
ಸುವಾರ್ತೆ
28ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು. 29ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, 30ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. 31ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು.
ಇಂದಿನ ಸಂತರು
- ಪೂಜ್ಯ ಸಂತ ಬೀಡ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ
- ಸಂತ ಗ್ರೆಗೊರಿ VII, ಪೋಪ್
- ಸಂತ ಮೇರಿ ಮಗ್ದಲೇನ್ ಡಿ ಪಾಜ್ಜಿ, ಕನ್ಯೆ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು