Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 25 ಮೇ

ಆರ್ಥೊಡಾಕ್ಸ್ ಪಂಚಾಂಗ · ಮೇ 12 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಮೇ 2027

ಮಂಗಳವಾರ · ಪಾಸ್ಕದ ನಾಲ್ಕನೆಯ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

St. Epiphanius the Bishop of Cyprus († 403)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 10:21–33

21ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು; “ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು?” ಎಂದು ಕೇಳಲು, 22ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು. 23ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪ ಪಟ್ಟಣದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು. 24ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು. 25ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು. 26ಆದರೆ ಪೇತ್ರನು; “ಏಳು, ನಾನೂ ಸಹಾ ಮನುಷ್ಯನೇ” ಎಂದು ಹೇಳಿ, ಅವನನ್ನು ಎತ್ತಿ, 27ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು. 28ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ. 29ಆದಕಾರಣ ನೀವು ನನ್ನನ್ನು ಕರೆಕಳುಹಿಸಿದಾಗ ನಾನು ಯಾವ ಎದುರುಮಾತನ್ನೂ ಆಡದೆ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನನಗೆ ತಿಳಿಸಬೇಕು” ಎಂದು ಕೇಳಿದನು. 30ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು; 31ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು. 32ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು. 33ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

ಸುವಾರ್ತೆ

ಯೋಹಾ 7:1–13

1ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ. 2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು, 3ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು. 4ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು. 5ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ. 6ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. 7ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ. 8ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು. 9ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು. 10ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು. 11ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು. 12ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು. 13ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಮೇ ಎಂದರೆ ನಾಗರಿಕ ಪಂಚಾಂಗದ 25 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು