Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 26 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಮೇ 2027

ಬುಧವಾರ · ಸಾಮಾನ್ಯ ಕಾಲದ ಎಂಟನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಎಂಟನೆಯ ವಾರದ ಬುಧವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಫಿಲಿಪ್ ನೇರಿ, ಧರ್ಮಗುರು · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 79:8–9, 11, 13

8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. 9ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು. 11ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು. 13ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಸುವಾರ್ತೆ

ಮಾರ್ಕ 10:32–45

32ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು; 33ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು. 34ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. 35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು. 36ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು, 37ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು. 38ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. 39ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು. 40ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. 41ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು. 42ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ. 43ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು. 44ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು. 45ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು