Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 27 ಮೇ

ಆರ್ಥೊಡಾಕ್ಸ್ ಪಂಚಾಂಗ · ಮೇ 14 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಮೇ 2027

ಗುರುವಾರ · ಪಾಸ್ಕದ ನಾಲ್ಕನೆಯ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Martyr Isidore of Chios

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 10:34–43

34ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ, 35ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ. 36ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ. 37ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು. 38ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ. 39ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. 40ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು. 41ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು. 42ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು. 43ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.

ಸುವಾರ್ತೆ

ಯೋಹಾ 8:12–20

12ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು. 13ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು 14ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು. 15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ. 16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ. 17ಇಬ್ಬರ ಸಾಕ್ಷಿಯು ಸತ್ಯವಾದದ್ದು ಎಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ. 18ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ” ಎಂದನು. 19ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು. 20ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಮೇ ಎಂದರೆ ನಾಗರಿಕ ಪಂಚಾಂಗದ 27 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು