Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 28 ಮೇ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಮೇ 2027

ಶುಕ್ರವಾರ · ಸಾಮಾನ್ಯ ಕಾಲದ ಎಂಟನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಎಂಟನೆಯ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 149:1–6, 9

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. 4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. 6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. 9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.

ಸುವಾರ್ತೆ

ಮಾರ್ಕ 11:11–26

11ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯದೊಳಗೆ ಹೋಗಿ ಸುತ್ತಲೂ ನೋಡಿದನು, ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಬೇಥಾನ್ಯಕ್ಕೆ ಹೊರಟು ಹೋದನು. 12ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು. 13ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ. 14ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು. 15ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು; 16ಒಬ್ಬನನ್ನಾದರೂ ಸಾಮಾನುಗಳನ್ನು ಹೊತ್ತುಕೊಂಡು ದೇವಾಲಯದೊಳಕ್ಕೆ ಹಾದು ಹೋಗಗೊಡಿಸಲಿಲ್ಲ. 17ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು. 18ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು. 19ಸಂಜೆಯಾದಾಗ ಯೇಸುವೂ, ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು. 20ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು. 21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ 22ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ. 23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. 24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. 25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು. 26ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು