Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 28 ಮೇ

ಆರ್ಥೊಡಾಕ್ಸ್ ಪಂಚಾಂಗ · ಮೇ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಮೇ 2027

ಶುಕ್ರವಾರ · ಪಾಸ್ಕದ ನಾಲ್ಕನೆಯ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Venerable Pachomius the Great, Founder of Cœnobitic Monasticism († c. 348)

ಉಪವಾಸದ ದಿನ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 10:44–11:10

44ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು. 45ಅವರು ನಾನಾ ಭಾಷೆಗಳನ್ನಾಡುತ್ತಾ, ದೇವರನ್ನು ಕೊಂಡಾಡುತ್ತಾ ಇರುವುದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ನೋಡಿ, 46ಅನ್ಯಜನಗಳಿಗೂ ಪವಿತ್ರಾತ್ಮನ ದಾನವಾಯಿತಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. 47ನಡೆದ ಸಂಗತಿಯನ್ನು ಪೇತ್ರನು ನೋಡಿ; “ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ದೀಕ್ಷಾಸ್ನಾನವಾಗದಂತೆ ಅಡ್ಡಿಪಡಿಸುವವರು ಯಾರು?” ಎಂದು ಹೇಳಿ ಅವರಿಗೆ, 48ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು. 11:1ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು. 2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿಮಾಡಿಸಿಕೊಂಡಿದ್ದ ಯೆಹೂದ್ಯರು; 3“ನೀನು ಸುನ್ನತಿಯಿಲ್ಲದವರಲ್ಲಿ ಸೇರಿ ಅವರ ಸಂಗಡ ಊಟಮಾಡಿದೆಯಲ್ಲಾ” ಎಂದು ಅವನ ಕೂಡ ವಾದಿಸಿದರು. 4ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ, 5ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು. 6ಅದೇನೆಂದು ತಿಳಿದುಕೊಳ್ಳುವುದಕ್ಕೆ ನಾನು ಅದನ್ನು ಚೆನ್ನಾಗಿ ನೋಡಿದಾಗ, ಭೂಮಿಯ ಮೇಲಿರುವ ಎಲ್ಲಾ ಪ್ರಾಣಿಗಳು, ಕಾಡುಮೃಗಳು, ಹರಿದಾಡುವ ಕ್ರಿಮಿಕೀಟಗಳನ್ನೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳನ್ನೂ ಕಂಡೆನು. 7ಆಗ; “ಪೇತ್ರನೇ, ಎದ್ದು, ಕೊಯ್ದು ತಿನ್ನು” ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು. 8ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು. 9ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು. 10ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.

ಸುವಾರ್ತೆ

ಯೋಹಾ 8:21–30

21ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು. 22ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು. 23ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ. 24ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು. 25ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ. 26ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು. 27ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ. 28ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ. 29ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು. 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಮೇ ಎಂದರೆ ನಾಗರಿಕ ಪಂಚಾಂಗದ 28 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು