ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 29 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 29 ಮೇ 2027
ಶನಿವಾರ · ಸಾಮಾನ್ಯ ಕಾಲದ ಎಂಟನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಎಂಟನೆಯ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಪಾಲ್ VI, ಪೋಪ್ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. 8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. 9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. 10ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
ಸುವಾರ್ತೆ
27ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು, 28“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು. 29ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 30ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು. 31ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು; 32‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. 33ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.
ಇಂದಿನ ಸಂತರು
- ಸಂತ ಪಾಲ್ VI, ಪೋಪ್
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು