Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 29 ಮೇ

ಆರ್ಥೊಡಾಕ್ಸ್ ಪಂಚಾಂಗ · ಮೇ 16 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 29 ಮೇ 2027

ಶನಿವಾರ · ಪಾಸ್ಕದ ನಾಲ್ಕನೆಯ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Venerable Theodore the Sanctified († 368)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 12:1–11

1ಆ ಸಮಯದಲ್ಲೇ ಅರಸನಾದ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸೆಪಡಿಸುವುದಕ್ಕೆ ಕೈಹಾಕಿದನು. 2ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. 3ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು. 4ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು. 5ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. 6ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು. 7ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು; ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನ ಪಕ್ಕೆಯನ್ನು ತಟ್ಟಿ ಎಬ್ಬಿಸಿ; “ತಟ್ಟನೆ ಏಳು” ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು. 8ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು. 9ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ, ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ತಿಳಿದನು. 10ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು. 11ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.

ಸುವಾರ್ತೆ

ಯೋಹಾ 8:31–42

31ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ. 32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು. 33ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು. 34ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ. 35ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ. 36ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು. 37ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ. 38ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು. 39ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ. 40ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ. 41ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು. 42ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 16 ಮೇ ಎಂದರೆ ನಾಗರಿಕ ಪಂಚಾಂಗದ 29 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು