ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 31 ಮೇ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 31 ಮೇ 2027
ಸೋಮವಾರ · ಸಾಮಾನ್ಯ ಕಾಲದ 9ನೇ ವಾರ
ಹಬ್ಬಗಳು ಮತ್ತು ಸಂತರು
ಪೂಜ್ಯ ಕನ್ಯೆ ಮರಿಯಳ ಭೇಟಿ
ಹಬ್ಬ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: ರೋಮಾ 12:9–16
14ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು! 15ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ. 16ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ; 17ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು. 18ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
ಪ್ರತಿವಚನ ಕೀರ್ತನೆ
2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಸುವಾರ್ತೆ
39ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು. 40ಜಕರೀಯನ ಮನೆಯನ್ನು ಸೇರಿ ಎಲಿಸಬೇತಳಿಗೆ ವಂದಿಸಿದಳು. 41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು. 42ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು. 43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು? 44ಇಗೋ, ನಿನ್ನ ವಂದನೆಯು ನನ್ನ ಕಿವಿಗೆ ಬೀಳುತ್ತಲೇ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಕುಣಿದಾಡಿತು. 45ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.” 46ಆಗ ಮರಿಯಳು, “ನನ್ನ ಪ್ರಾಣವು ಕರ್ತನನ್ನು ಕೊಂಡಾಡುತ್ತದೆ, 47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 50ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು. 51ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ. 52ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ. 53ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. 54ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು. 56ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು