ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಮೇ 2027 › 31 ಮೇ
ಆರ್ಥೊಡಾಕ್ಸ್ ಪಂಚಾಂಗ · ಮೇ 18 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಮೇ 2027
ಸೋಮವಾರ · ಪಾಸ್ಕದ ಐದನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Commemoration of the Holy Fathers of Seven Ecumenical Councils
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
12ಆತನು ಇದನ್ನು ತಿಳಿದುಕೊಂಡ ತರುವಾಯ, ಅವನು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು. 13ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು. 14ಅವಳು ಪೇತ್ರನ ಧ್ವನಿಯನ್ನು ಗುರುತುಹಿಡಿದು ಅತಿಯಾದ ಆನಂದದಿಂದ ಬಾಗಿಲನ್ನು ತೆರೆಯದೆ ಒಳಕ್ಕೆ ಓಡಿಹೋಗಿ; “ಪೇತ್ರನು ಬಾಗಿಲ ಮುಂದೆ ನಿಂತಿದ್ದಾನೆ” ಎಂದು ತಿಳಿಸಿದಳು. ಅವರು ಅವಳಿಗೆ; “ನಿನಗೆ ಹುಚ್ಚು ಹಿಡಿದದೆ” ಎಂದು ಹೇಳಿದರು. 15ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು. 16ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು. 17ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
ಸುವಾರ್ತೆ
42ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ. 43ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ. 44ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ. 45ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ. 46ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ? 47ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು. 48ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು. 49ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ. 50ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ. 51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಮೇ ಎಂದರೆ ನಾಗರಿಕ ಪಂಚಾಂಗದ 31 ಮೇ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು