ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 1 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಜೂನ್ 2027
ಮಂಗಳವಾರ · ಸಾಮಾನ್ಯ ಕಾಲದ 9ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 9ನೇ ವಾರದ ಮಂಗಳವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಜಸ್ಟಿನ್, ಹುತಾತ್ಮ · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು. 2ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು. 7ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು. 8ದುಷ್ಟರಿಗಾಗುವ ಶಿಕ್ಷೆಯನ್ನು ಕಣ್ಣಾರೆ ಕಾಣುವೆನೆಂಬ ಭರವಸೆ ಇರುವುದರಿಂದ ಅವನ ಮನಸ್ಸು ದೃಢವಾಗಿದೆ, ಹೆದರುವುದಿಲ್ಲ. 9ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಸುವಾರ್ತೆ
13ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು. 14ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು. 15ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು. 16ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು. 17ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
ಇಂದಿನ ಸಂತರು
- ಸಂತ ಜಸ್ಟಿನ್, ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು