ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 1 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಮೇ 19 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಜೂನ್ 2027
ಮಂಗಳವಾರ · ಪಾಸ್ಕದ ಐದನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Hieromartyrs Patrick the Bishop of Prussa and the Priests Acacius, Menander, and Polyenus († c. 100)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
25ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು. 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ. 2ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. 3ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು. 4ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು. 5ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು. 6ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. 7ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು. 8ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. 9ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ, 10ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ? 11ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು. 12ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
ಸುವಾರ್ತೆ
51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು. 52ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ? 53ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು. 54ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ, 55ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ. 56ನಿಮ್ಮ ಮೂಲಪುರುಷನಾದ ಅಬ್ರಹಾಮನು ನನ್ನ ದಿನವನ್ನು ತಾನು ನೋಡುತ್ತೇನೆಂದು ಉಲ್ಲಾಸಪಟ್ಟನು ಮತ್ತು ಅದನ್ನು ನೋಡಿ ಸಂತೋಷಪಟ್ಟನು” ಎಂದು ಹೇಳಿದನು. 57ಅದಕ್ಕೆ ಯೆಹೂದ್ಯರು, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಅಂದರು. 58ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು. 59ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಮೇ ಎಂದರೆ ನಾಗರಿಕ ಪಂಚಾಂಗದ 1 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು