ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 2 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಜೂನ್ 2027
ಬುಧವಾರ · ಸಾಮಾನ್ಯ ಕಾಲದ 9ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 9ನೇ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತರಾದ ಮಾರ್ಸೆಲಿನಸ್ ಮತ್ತು ಪೀಟರ್, ಹುತಾತ್ಮರು · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
2ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ. 3ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು. 4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. 7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. 8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
ಸುವಾರ್ತೆ
18ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು, 19ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ. 20“ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. 21ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು. 22ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು. 23ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು. 24ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ? 25ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ. 26ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’ 27ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
ಇಂದಿನ ಸಂತರು
- ಸಂತರಾದ ಮಾರ್ಸೆಲಿನಸ್ ಮತ್ತು ಪೀಟರ್, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು