ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 2 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಮೇ 20 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಜೂನ್ 2027
ಬುಧವಾರ · ಪಾಸ್ಕದ ಐದನೆಯ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಮಧ್ಯಹಬ್ಬದ ಸಮಾಪ್ತಿ
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು. 14ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. 15ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು. 16ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ; 17“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು. 18ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು, 19ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು. 20ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು. 21ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು. 22ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು. 23“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. 24ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
ಸುವಾರ್ತೆ
5ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು. 6ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು. 7ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು. 8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ; 9“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು, 10ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು. 11ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು. 12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು. 13ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು. 14ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಮೇ ಎಂದರೆ ನಾಗರಿಕ ಪಂಚಾಂಗದ 2 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು