ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 4 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಜೂನ್ 2027
ಶುಕ್ರವಾರ · ಸಾಮಾನ್ಯ ಕಾಲದ 9ನೇ ವಾರ
ಹಬ್ಬಗಳು ಮತ್ತು ಸಂತರು
ಯೇಸುವಿನ ಅತಿಪವಿತ್ರ ಹೃದಯ
ಮಹೋತ್ಸವ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
1ಇಸ್ರಾಯೇಲ್ ಇನ್ನೂ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯಿಟ್ಟು, ಆ ನನ್ನ ಮಗನನ್ನು ಐಗುಪ್ತ ದೇಶದಿಂದ ಕರೆದೆನು. 3ನಾನೇ ಎಫ್ರಾಯೀಮಿಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು. ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ. 4ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು. 8ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು. 9ನನ್ನ ಉಗ್ರಕೋಪವನ್ನು ತೀರಿಸೆನು, ಎಫ್ರಾಯೀಮನ್ನು ನಾಶಮಾಡಲು ತಿರಿಗಿಕೊಳ್ಳೆನು. ನಾನು ಮನುಷ್ಯನಲ್ಲ, ದೇವರೇ; ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿ, ನಾನು ನಿನ್ನ ಬಳಿಗೆ ರೋಷದಿಂದ ಬಾರೆನು.
ಪ್ರತಿವಚನ ಕೀರ್ತನೆ
2ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” 3ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ. 4ಆ ದಿನದಲ್ಲಿ ನೀವು ಹೇಳುವುದೇನೆಂದರೆ, “ಯೆಹೋವನಿಗೆ ಕೃತಜ್ಞತಾ ಸ್ತುತಿಮಾಡಿರಿ, ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಿಪಡಿಸಿರಿ, ಆತನ ನಾಮವು ಉನ್ನತೋನ್ನತ ಎಂದು ಜ್ಞಾಪಕಪಡಿಸಿರಿ. 5ಯೆಹೋವನನ್ನು ಗಾನದಿಂದ ಸ್ತುತಿಸಿರಿ; ಆತನು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.
ಎರಡನೆಯ ವಾಚನ
8ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ 9ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. 10ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. 12ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. 14ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, 16ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, 17ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 18ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ಸುವಾರ್ತೆ
31ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು. 32ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು. 33ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ. 34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು. 35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. 36ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು. 37“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು