ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 5 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಜೂನ್ 2027
ಶನಿವಾರ · ಸಾಮಾನ್ಯ ಕಾಲದ 9ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 9ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಬೊನಿಫೇಸ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ಪೂಜ್ಯ ಕನ್ಯೆ ಮರಿಯಳ ನಿಷ್ಕಳಂಕ ಹೃದಯ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
ಈ ಅನುವಾದದಲ್ಲಿ ಇಲ್ಲ
ಸುವಾರ್ತೆ
38ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ, 39ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ. 40ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು. 41ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. 42ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. 43ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 44ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
ಇಂದಿನ ಸಂತರು
- ಸಂತ ಬೊನಿಫೇಸ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು