Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 5 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಮೇ 23 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಜೂನ್ 2027

ಶನಿವಾರ · ಪಾಸ್ಕದ ಐದನೆಯ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

St. Michael the Confessor and Bishop of Synnada († 821)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 15:35–41

35ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. 36ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು. 37ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು 38ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು. 39ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು. 40ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ 41ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

ಸುವಾರ್ತೆ

ಯೋಹಾ 10:27–38

27ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. 28ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು. 29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು. 30ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು. 31ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು, 32ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ, 33ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು. 34ಅದಕ್ಕೆ ಯೇಸು, “‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ? 35ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ 36ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’ 37ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ 38ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಮೇ ಎಂದರೆ ನಾಗರಿಕ ಪಂಚಾಂಗದ 5 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು