ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 7 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಮೇ 25 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಜೂನ್ 2027
ಸೋಮವಾರ · ಪಾಸ್ಕದ ಆರನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Third Finding of the Honorable Head of the Holy Glorious Prophet, Forerunner and Baptist John (c. 850)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಪ್ರಾರ್ಥನೆ: ಸುವಾರ್ತೆ
17ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು. 18ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು, 19ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು. 20ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು. 21ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. 22ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. 23ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು. 24ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 25ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ. 26ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. 27‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. 28ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ. 29ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. 30ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
ಪತ್ರಿಕೆ
1ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು. 2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ, 3ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು. 4ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು. 5ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು. 6ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ. 7ಯಾಸೋನನು ಅವರನ್ನು ಸೇರಿಸಿಕೊಂಡಿದ್ದಾನೆ, ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಚಕ್ರವರ್ತಿಯ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ” ಎಂದು ಕೂಗಿದರು. 8ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು 9ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು. 10ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು. 11ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು. 12ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು. 13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು. 14ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು. 15ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.
ಪತ್ರಿಕೆ (ಮುಂದೂತ)
6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. 7ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. 13“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
ಸುವಾರ್ತೆ
47ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ. 48ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು. 49ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ. 50ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು. 51ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ 52ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು 53ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು. 54ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು. 55ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು. 56ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು. 57ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
ಸುವಾರ್ತೆ (ಮುಂದೂತ)
2ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ, 3“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು. 4ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; 5ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. 6ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. 7ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 8ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. 9ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ. 10‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. 11ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. 13ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. 14ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. 15ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 25 ಮೇ ಎಂದರೆ ನಾಗರಿಕ ಪಂಚಾಂಗದ 7 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು