Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 8 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಜೂನ್ 2027

ಮಂಗಳವಾರ · ಸಾಮಾನ್ಯ ಕಾಲದ 10ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 10ನೇ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 1:18–22

18ದೇವರು ನಂಬಿಗಸ್ತನಾಗಿರುವಂತೆ ನಾವು ನಿಮಗೆ ಹೇಳುವ ಮಾತು ಒಂದು ಸಾರಿ “ಹೌದೆಂದು” ಮತ್ತೊಂದು ಸಾರಿ “ಇಲ್ಲವೆಂದು” ಆಗಿರಲು ಸಾಧ್ಯವಿಲ್ಲ. ಅದಕ್ಕೆ ನಂಬಿಗಸ್ತನಾದ ದೇವರೇ ಸಾಕ್ಷಿಯಾಗಿದ್ದಾನೆ. 19ನಾನೂ, ಸಿಲ್ವಾನನೂ, ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಈ ಕ್ಷಣ “ಹೌದು” ಮರುಕ್ಷಣ “ಇಲ್ಲ” ಎಂದು ಹೇಳುವವನಲ್ಲ. ಆತನಲ್ಲಿ ಹೌದೆಂಬುದೇ ನೆಲೆಗೊಂಡಿದೆ. 20ಆದ್ದರಿಂದ ದೇವರ ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತನಲ್ಲಿ “ಹೌದು” ಎಂಬುದೇ ಆಗಿದೆ. ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ಆತನ ಮೂಲಕವಾಗಿ ನಾವು “ಆಮೆನ್” ಎಂದು ಹೇಳುತ್ತೇವೆ. 21ನಮ್ಮನ್ನು ಅಭಿಷೇಕಿಸಿ ಕ್ರಿಸ್ತನ ಅನ್ಯೋನ್ಯತೆಯಲ್ಲಿ ಸೇರಿಸಿ ನಮ್ಮನ್ನು ನಿಮ್ಮೊಂದಿಗೆ ಸ್ಥಿರಪಡಿಸುವವನು ದೇವರೇ. 22ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.

ಪ್ರತಿವಚನ ಕೀರ್ತನೆ

ಕೀರ್ತ 119:129–133, 135

129ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ. 130ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ. 131ನಾನು ಬಾಯಾರಿ ನಿನ್ನನ್ನೇ ಎದುರುನೋಡುತ್ತಿದ್ದೇನೆ, ನಿನ್ನ ಆಜ್ಞೆಗಳನ್ನು ಲವಲವಿಕೆಯಿಂದ ಬಯಸಿದ್ದೇನೆ. 132ನನಗೆ ಅಭಿಮುಖನಾಗಿ ಕರುಣಿಸು, ನಿನ್ನ ಹೆಸರನ್ನು ಪ್ರೀತಿಸುವವರಿಗೆ ಹೀಗೆ ಮಾಡುವುದು ನಿನ್ನ ನಿಯಮವಲ್ಲವೇ? 133ನಿನ್ನ ನುಡಿಗನುಸಾರವಾಗಿ ನನ್ನ ಹೆಜ್ಜೆಯನ್ನು ದೃಢಪಡಿಸು, ಯಾವ ಅನ್ಯಾಯವಾದರೂ ನನ್ನನ್ನು ಆಳದಂತೆ ಮಾಡು. 135ನಿನ್ನ ದಾಸನ ಮೇಲೆ ನಿನ್ನ ಮುಖಪ್ರಸನ್ನತೆಯಿರಲಿ, ನಿನ್ನ ನಿಬಂಧನೆಗಳನ್ನು ನನಗೆ ಕಲಿಸು.

ಸುವಾರ್ತೆ

ಮತ್ತಾ 5:13–16

13“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ. 14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. 15ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. 16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು