Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 8 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಮೇ 26 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಜೂನ್ 2027

ಮಂಗಳವಾರ · ಪಾಸ್ಕದ ಆರನೆಯ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Apostles of the Seventy Carpus and Alphæus (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 17:19–28

19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ? 20ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು. 21ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ. 22ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ. 23ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. 24“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; 25ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ. 26ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ, 27ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. 28ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಸುವಾರ್ತೆ

ಯೋಹಾ 12:19–36

19ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. 20ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು. 21ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು. 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. 23ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ. 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು 25ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. 26ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. 27ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ? 28ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು. 29ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು. 30ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. 31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು 32ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. 33ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು. 34ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. 35ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. 36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಮೇ ಎಂದರೆ ನಾಗರಿಕ ಪಂಚಾಂಗದ 8 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು