Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 9 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 9 ಜೂನ್ 2027

ಬುಧವಾರ · ಸಾಮಾನ್ಯ ಕಾಲದ 10ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 10ನೇ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಎಫ್ರೇಮ್, ಧರ್ಮಸೇವಕ ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 3:4–11

4ನಮಗೆ ಇಂಥ ಭರವಸೆಯು ಕ್ರಿಸ್ತನ ಮೂಲಕವೇ ದೇವರಲ್ಲಿದೆ. 5ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು. 6ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ. 7ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ. 8ಹೀಗಿದ್ದ ಮೇಲೆ ದೇವರಾತ್ಮಸಂಬಂಧವಾದ ಈ ಸೇವೆಯು ಇನ್ನೆಷ್ಟು ಮಹಿಮೆಯಿಂದ ಇರಬೇಕಲ್ಲವೇ? 9ಅಪರಾಧ ನಿರ್ಣಯಕ್ಕೆ ಸಾಧನವಾಗಿರುವ ಸೇವೆಯು ಮಹಿಮೆಹೊಂದಿರಲಾಗಿ, ನೀತಿಗೆ ಸಾಧನವಾಗಿರುವ ಸೇವೆಯು ಇನ್ನೆಷ್ಟೋ ಅಧಿಕ ಮಹಿಮೆಯುಳ್ಳದ್ದಾಗಿ ಇರತ್ತದಲ್ಲವೋ? 10ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. 11ಅಳಿದು ಹೋಗುವಂಥದ್ದೇ, ಅಷ್ಟು ಪ್ರಭಾವವುಳ್ಳದ್ದಾಗಿದ್ದರೆ ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಹೆಚ್ಚಾದ ಪ್ರಭಾವವುಳ್ಳದ್ದಾಗಿರಬೇಕಲ್ಲವೋ?

ಪ್ರತಿವಚನ ಕೀರ್ತನೆ

ಕೀರ್ತ 99:5–9

5ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು. 6ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. 7ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. 8ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ. 9ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.

ಸುವಾರ್ತೆ

ಮತ್ತಾ 5:17–19

17“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. 18ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. 19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು