Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 9 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಮೇ 27 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಜೂನ್ 2027

ಬುಧವಾರ · ಪಾಸ್ಕದ ಆರನೆಯ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

ಪಾಸ್ಕದ ಸಮಾಪ್ತಿ; ಸ್ವರ್ಗಾರೋಹಣದ ಪೂರ್ವಹಬ್ಬ

ಉಪವಾಸದ ದಿನ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 18:22–28

22ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು. 23ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ಪುನಃ ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ, ಫ್ರುಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು. 24ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು. 25ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು. 26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು. 27ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು. 28ಅವನು ಹೋಗಿ ಯೇಸುವೇ ಕ್ರಿಸ್ತನೆಂದು ದೇವರ ವಾಕ್ಯದಿಂದ ಯೆಹೂದ್ಯರಿಗೆ ತೋರಿಸಿಕೊಟ್ಟು ಎಲ್ಲರ ಮುಂದೆ ಬಲವಾಗಿ ಈ ವಿಷಯವನ್ನು ರುಜುವಾತುಪಡಿಸುತ್ತಾ ಯೆಹೂದ್ಯರನ್ನು ಖಂಡಿಸಿ ದೇವರ ಕೃಪೆಯಿಂದ ನಂಬಿದವರಿಗೆ ಬಹಳ ಸಹಾಯಮಾಡಿದನು.

ಸುವಾರ್ತೆ

ಯೋಹಾ 12:36–47

36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು. 37ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. 38ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. 39ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ, 40“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ. 41ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು. 42ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. 43ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು. 44ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ. 45ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ. 46ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. 47ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 27 ಮೇ ಎಂದರೆ ನಾಗರಿಕ ಪಂಚಾಂಗದ 9 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು