ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 11 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಜೂನ್ 2027
ಶುಕ್ರವಾರ · ಸಾಮಾನ್ಯ ಕಾಲದ 10ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 10ನೇ ವಾರದ ಶುಕ್ರವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಬಾರ್ನಬ, ಅಪೊಸ್ತಲ · ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
21ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು. 22ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. 23ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು. 24ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು. 25ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. 26ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು. 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ. 2ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು. 3ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
ಪ್ರತಿವಚನ ಕೀರ್ತನೆ
10“ನಾನು ಬಹಳವಾಗಿ ಕುಗ್ಗಿಹೋದೆ” ಎಂದು ಹೇಳಿದಾಗಲೂ, 11“ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು. 15ಯೆಹೋವನು ತನ್ನ ಭಕ್ತರ ಮರಣವನ್ನು ಅಲ್ಪವೆಂದು ಎಣಿಸುವುದಿಲ್ಲ. 16ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ. 17ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು. 18ಯೆರೂಸಲೇಮೇ, ನಿನ್ನ ಮಧ್ಯದಲ್ಲಿ, ಯೆಹೋವನ ಮಂದಿರದ ಅಂಗಳಗಳಲ್ಲಿ,
ಸುವಾರ್ತೆ
27“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ. 28ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ. 29ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. 30ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. 31ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. 32ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
ಇಂದಿನ ಸಂತರು
- ಸಂತ ಬಾರ್ನಬ, ಅಪೊಸ್ತಲ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು