ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 11 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಮೇ 29 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಜೂನ್ 2027
ಶುಕ್ರವಾರ · ಪಾಸ್ಕದ ಆರನೆಯ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Virginmartyr Theodosia of Constantinople († 730)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು; 2“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು. 3ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು. 4ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು, 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. 6ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು. 7ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು. 8ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಸುವಾರ್ತೆ
1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. 2ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ! 3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು. 4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು. 5ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು, 6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು. 7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು. 8ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು. 9ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ? 10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಮೇ ಎಂದರೆ ನಾಗರಿಕ ಪಂಚಾಂಗದ 11 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು