Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 12 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಜೂನ್ 2027

ಶನಿವಾರ · ಸಾಮಾನ್ಯ ಕಾಲದ 10ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 10ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 5:14–21

14ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. 15ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. 16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ. 17ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. 18ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; 19ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ. 20ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. 21ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.

ಪ್ರತಿವಚನ ಕೀರ್ತನೆ

ಕೀರ್ತ 103:1–4, 8–9, 11–12

1ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. 2ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. 3ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ, 4ನಿನ್ನ ಜೀವವನ್ನು ನಾಶನದಿಂದ ತಪ್ಪಿಸುವವನೂ, ಶಾಶ್ವತ ಪ್ರೀತಿ ಮತ್ತು ಕರುಣೆಯೆಂಬ ಕಿರೀಟದಿಂದ ನಿನ್ನನ್ನು ಶೃಂಗರಿಸುವವನೂ ಆಗಿದ್ದಾನೆ. 8ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು. 9ಆತನು ಯಾವಾಗಲೂ ತಪ್ಪು ಹುಡುಕುವವನಲ್ಲ; ನಿತ್ಯವೂ ಕೋಪಿಸುವವನಲ್ಲ. 11ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. 12ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.

ಸುವಾರ್ತೆ

ಮತ್ತಾ 5:33–37

33“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ. 34ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು. 35ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ. 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ. 37ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು