Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 12 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಮೇ 30 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಜೂನ್ 2027

ಶನಿವಾರ · ಪಾಸ್ಕದ ಆರನೆಯ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Venerable Isaac the Founder of the Dalmatian Monastery at Constantinople († 383)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 20:7–12

7ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು. 8ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು. 9ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು. 10ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು. 11ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು. 12ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.

ಸುವಾರ್ತೆ

ಯೋಹಾ 14:10–21

10ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ. 11ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ. 12“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ. 13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು. 14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು. 15“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ. 16ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. 17ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. 18“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ. 19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ. 20ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ. 21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಮೇ ಎಂದರೆ ನಾಗರಿಕ ಪಂಚಾಂಗದ 12 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು