Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 13 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 13 ಜೂನ್ 2027

ಭಾನುವಾರ · ಸಾಮಾನ್ಯ ಕಾಲದ 11ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 11ನೇ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಯೆಹೆ 17:22–24

22ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು. 23ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು. 24ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”

ಪ್ರತಿವಚನ ಕೀರ್ತನೆ

ಕೀರ್ತ 92:1–2, 12–15

1ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. 2ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, 12ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. 13ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. 14ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. 15ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

ಎರಡನೆಯ ವಾಚನ

2 ಕೊರಿ 5:6–10

6ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ 7ನಾವು ನೋಡುತ್ತಾ ನಡೆಯದೇ, ನಂಬುವವರಾಗಿಯೇ ನಡೆಯುತ್ತೇವೆ. 8ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ. 9ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. 10ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.

ಸುವಾರ್ತೆ

ಮಾರ್ಕ 4:26–34

26ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ 27ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. 28ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ. 29ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು. 30ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? 31ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. 32ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು. 33ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 34ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು