Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 14 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಜೂನ್ 1 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 14 ಜೂನ್ 2027

ಸೋಮವಾರ · ಪಾಸ್ಕದ ಏಳನೆಯ ವಾರ · ಸ್ವರ 6

ಹಬ್ಬಗಳು ಮತ್ತು ಸಂತರು

Martyr Justin the Philosopher, another Justin, and those with them at Rome: Chariton, his wife Charita, Euelpistus, Hierax, Peonus, and Valerian († 166)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಅ. ಕೃ 21:8–14

8ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು. 9ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು. 10ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು, 11ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು. 12ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು. 13ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು. 14ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.

ಸುವಾರ್ತೆ

ಯೋಹಾ 14:27–15:7

27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ. 28ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು. 29ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ. 30ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ. 31ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು. 15:1“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು. 2ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ. 3ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ. 4ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. 5ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ. 6ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ. 7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 1 ಜೂನ್ ಎಂದರೆ ನಾಗರಿಕ ಪಂಚಾಂಗದ 14 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು