ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 15 ಜೂನ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಜೂನ್ 2027
ಮಂಗಳವಾರ · ಸಾಮಾನ್ಯ ಕಾಲದ 11ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 11ನೇ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ, 2ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. 3ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು. 4ಇದಕ್ಕೆ ನಾನೇ ಸಾಕ್ಷಿ. ದೇವಜನರಿಗೆ ಸಹಾಯ ಮಾಡುವ ಕೆಲಸದಲ್ಲಿ ತಾವು ಪಾಲುಗಾರರಾಗಲು ಅಪ್ಪಣೆಯಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. 5ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು. 6ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ. 7ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ. 8ಇದನ್ನು ಆಜ್ಞಾರೂಪವಾಗಿ ಹೇಳುತ್ತಿಲ್ಲ ಆದರೆ ಇತರರ ಆಸಕ್ತಿಗೆ ಹೋಲಿಸಿ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾದದ್ದೆಂಬುದನ್ನು ಸಾಬೀತು ಮಾಡಬೇಕೆಂದು ಹೇಳುತ್ತೇನೆ. 9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಸ್ತೋತ್ರ! ನನ್ನ ಮನವೇ, ಯೆಹೋವನನ್ನು ಸ್ತುತಿಸು. 2ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು, ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು. 5ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು. 6ಭೂಮಿ, ಆಕಾಶ, ಸಾಗರ, ಜಲಚರ ಇವುಗಳನ್ನು ನಿರ್ಮಿಸಿದವನೂ, ವಾಗ್ದಾನವನ್ನು ಯಾವಾಗಲೂ ನೆರವೇರಿಸುವವನೂ, 7ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. 8ಯೆಹೋವನು ಕುರುಡರಿಗೆ ಕಣ್ಣು ಕೊಡುತ್ತಾನೆ. ಯೆಹೋವನು ಕುಗ್ಗಿದವರನ್ನು ಉದ್ಧರಿಸುತ್ತಾನೆ. ಯೆಹೋವನು ನೀತಿವಂತರನ್ನು ಪ್ರೀತಿಸುತ್ತಾನೆ. 9ಯೆಹೋವನು ಪರದೇಶದವರನ್ನು ಕಾಪಾಡುತ್ತಾನೆ. ಆತನು ಅನಾಥರಿಗೂ, ವಿಧವೆಯರಿಗೂ ಆಧಾರವಾಗಿದ್ದಾನೆ. ಆದರೆ ದುಷ್ಟರ ಮಾರ್ಗವನ್ನು ಡೊಂಕು ಮಾಡುತ್ತಾನೆ.
ಸುವಾರ್ತೆ
43“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. 46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ. 47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ. 48ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು