ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 15 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 2 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಜೂನ್ 2027
ಮಂಗಳವಾರ · ಪಾಸ್ಕದ ಏಳನೆಯ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
St. Nicephorus the Confessor, Patriarch of Constantinople († 828)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
26ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು. 27ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು; 28“ಇಸ್ರಾಯೇಲ್ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು. 29ಮೊದಲು ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ನೋಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು. 30ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು. 31ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು. 32ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.
ಸುವಾರ್ತೆ
2ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ. 3ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು. 4ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ. 5“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ. 6ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ. 7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ. 8ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 9ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ 10ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ, 11ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು. 12“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ. 13ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಜೂನ್ ಎಂದರೆ ನಾಗರಿಕ ಪಂಚಾಂಗದ 15 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು