ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 16 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಜೂನ್ 2027
ಬುಧವಾರ · ಪಾಸ್ಕದ ಏಳನೆಯ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Holy Martyrs Lucillian, the Youths Claudius, Hypatius, and Dionysius, and Paula the Virgin († 270-275)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು. 2ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ; 3“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು. 4ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು, 5ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು. 6ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು. 7ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು. 8ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು. 9ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು. 10ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು. 11ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.
ಸುವಾರ್ತೆ
15ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು. 16ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು. 17ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು 18“‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು. 19ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ? 20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು. 21ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ. 22ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. 23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಜೂನ್ ಎಂದರೆ ನಾಗರಿಕ ಪಂಚಾಂಗದ 16 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು