Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 17 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಜೂನ್ 2027

ಗುರುವಾರ · ಸಾಮಾನ್ಯ ಕಾಲದ 11ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 11ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 11:1–11

1ನಾನು ನನ್ನನ್ನು ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ. ನೀವು ನನ್ನನ್ನು ಸಹಿಸಿಕೊಳ್ಳಿರಿ. 2ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ. 3ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ. 4ಯಾಕೆಂದರೆ ಯಾರಾದರು ಬಂದು ನಾವು ಬೋಧಿಸಿದ ಯೇಸುವನ್ನಲ್ಲದೆ ಮತ್ತೊಬ್ಬ ಯೇಸುವನ್ನು ನಿಮಗೆ ಪ್ರಕಟಿಸುವಾಗಲೂ ಇಲ್ಲವೇ ನೀವು ಹೊಂದದೆ ಇದ್ದ ಬೇರೆ ವಿಧವಾದ ಆತ್ಮಪ್ರೇರಣೆಯನ್ನು ಹೊಂದುವಾಗಲೂ, ನೀವು ಒಪ್ಪಿಕೊಳ್ಳದೆ ಇದ್ದ ಬೇರೊಂದು ಸುವಾರ್ತೆಯನ್ನು ಕೇಳುವಾಗಲೂ ನೀವು ಸಹಿಸಿಕೊಳ್ಳುತ್ತಿರುವುದು ಬಹು ಆಶ್ಚರ್ಯ. 5“ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ 6ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. 7ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ? 8ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ. 9ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು. 10ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ. 11ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.

ಪ್ರತಿವಚನ ಕೀರ್ತನೆ

ಕೀರ್ತ 111:1–4, 7–8

1ಯೆಹೋವನಿಗೆ ಸ್ತೋತ್ರ! ನಾನು ಯೆಹೋವನನ್ನು ಕೊಂಡಾಡುವೆನು; ಯಥಾರ್ಥರ ಕೂಟದಲ್ಲಿಯೂ, ನೆರೆದ ಸಭೆಯಲ್ಲಿಯೂ, ಮನಃಪೂರ್ವಕವಾಗಿ ಕೀರ್ತಿಸುವೆನು. 2ಯೆಹೋವನ ಕೃತ್ಯಗಳು ಮಹತ್ತಾದವುಗಳು; ಅವುಗಳಲ್ಲಿ ಸಂತೋಷಿಸುವವರು ಅವುಗಳನ್ನೇ ಧ್ಯಾನಿಸುವರು. 3ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು. 4ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು. 7ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ. 8ಅವು ದೃಢವಾದ ಆಧಾರವುಳ್ಳವುಗಳು; ಯುಗಯುಗಾಂತರಕ್ಕೂ ಇರುವವು. ಸತ್ಯ, ನೀತಿಗಳಿಗನುಸಾರವಾಗಿ ವಿಧಿಸಲ್ಪಟ್ಟಿವೆ.

ಸುವಾರ್ತೆ

ಮತ್ತಾ 6:7–15

7ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ. 8ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ. 9ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, 10“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. 11ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. 12ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು. 13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು 14ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. 15ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು