ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 17 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಜೂನ್ 2027
ಗುರುವಾರ · ಪಾಸ್ಕದ ಏಳನೆಯ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
St. Metrophanes the first Patriarch of Constantinople († c. 326)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
13ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು. 14ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ. 15ನಾನು ಯೆರೂಸಲೇಮಿನಲ್ಲಿದ್ದಾಗ, ಯೆಹೂದ್ಯರ ಮುಖ್ಯಯಾಜಕರೂ, ಹಿರಿಯರೂ ಅವನ ವಿಷಯವಾಗಿ ನನಗೆ ದೂರುಹೇಳಿ ಅವನಿಗೆ ವಿರುದ್ಧವಾಗಿ ತೀರ್ಪು ಆಗಬೇಕೆಂದು ಬೇಡಿಕೊಂಡರು. 16“ನಾನು ಅವರಿಗೆ; ಪ್ರತಿವಾದಿಯು ವಾದಿಗಳಿಗೆ, ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಆರೋಪಿಸಿದ ದೋಷದ ವಿಷಯದಲ್ಲಿ ಪ್ರತಿವಾದಮಾಡುವುದಕ್ಕೆ ಎಡೆಕೊಡದೆ, ಅವನನ್ನು ಒಪ್ಪಿಸಿಬಿಡುವುದು ರೋಮಾಯರ ಪದ್ಧತಿಯಲ್ಲವೆಂದು” ಹೇಳಿದೆನು. 17ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು. 18ತಪ್ಪು ಹೊರಿಸುವವರು ನಿಂತುಕೊಂಡು ನಾನು ಭಾವಿಸಿದ್ದ ಅಪರಾಧಗಳಲ್ಲಿ ಒಂದನ್ನಾದರೂ ಅವನ ಮೇಲೆ ಹೊರಿಸದೆ, 19ಅವರ ಮತದ ವಿಷಯದಲ್ಲಿಯೂ, ಜೀವಿಸಿದ್ದಾನೆ ಎಂದು, ಪೌಲನು ಹೇಳುವ ಸತ್ತುಹೋದಂಥ ಯೇಸುವೆಂಬ ಒಬ್ಬನ ವಿಷಯದಲ್ಲಿಯೂ, ಅವನ ಮೇಲೆ ಕೆಲವು ವಿವಾದದ ಮಾತುಗಳನ್ನು ತಂದರು.
ಸುವಾರ್ತೆ
23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು. 24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು. 25“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ. 26ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ. 27ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ. 28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು. 29ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ. 30ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು. 31ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ. 32ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. 33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಜೂನ್ ಎಂದರೆ ನಾಗರಿಕ ಪಂಚಾಂಗದ 17 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು