Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 18 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಜೂನ್ 2027

ಶುಕ್ರವಾರ · ಸಾಮಾನ್ಯ ಕಾಲದ 11ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 11ನೇ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 11:18, 21–30

18ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ. 21ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. 22ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು. 23ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ. 24ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಲವತ್ತು ಏಟುಗಳು ಬಿದ್ದವು. 25ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು. 26ಕ್ರಿಸ್ತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು. ನದಿಗಳ ಅಪಾಯಗಳೂ, ಕಳ್ಳರ ಅಪಾಯಗಳೂ, ಸ್ವಂತ ಜನರಿಂದ ಅಪಾಯಗಳೂ, ಅನ್ಯಜನರಿಂದ ಅಪಾಯಗಳೂ, ಪಟ್ಟಣದಲ್ಲಿ ಅಪಾಯ, ನಿರ್ಜನ ಸ್ಥಳದಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ, ಸುಳ್ಳು ಸಹೋದರರೊಳಗಿನಿಂದಾದ ಅಪಾಯಗಳೂ ನನಗೆ ಸಂಭವಿಸಿದವು. 27ಶ್ರಮೆಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟ, ಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ. 28ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು. 29ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ? 30ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.

ಪ್ರತಿವಚನ ಕೀರ್ತನೆ

ಕೀರ್ತ 34:1–6

1ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ. ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು. 2ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. 3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.

ಸುವಾರ್ತೆ

ಮತ್ತಾ 6:19–23

19“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. 20ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, 21ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ. 22“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು. 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು