Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 19 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಜೂನ್ 2027

ಶನಿವಾರ · ಸಾಮಾನ್ಯ ಕಾಲದ 11ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 11ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ರೊಮುವಾಲ್ಡ್, ಮಠಾಧಿಪತಿ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

2 ಕೊರಿ 12:1–10

1ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ. 2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು. 3ಅವನು ಪರದೈಸಿ ತನಕ ಒಯ್ಯಲ್ಪಟ್ಟು ಮನುಷ್ಯರಿಂದ ಉಚ್ಚರಿಸಲೂ, ಆಡಲೂ ಬಾರದಂತಹ ಮಾತುಗಳನ್ನು ಕೇಳಿದನೆಂದೂ ಬಲ್ಲೆನು. ಆ ಸಮಯದಲ್ಲಿ ಆತನು ದೇಹಸಹಿತನಾಗಿದ್ದನೋ ಅಥವಾ ದೇಹರಹಿತನಾಗಿದ್ದನೋ ನಾನರಿಯೆನು, ದೇವರೇ ಬಲ್ಲನು. 5ಅವನನ್ನು ಕುರಿತಾಗಿ ನಾನು ಹೆಮ್ಮೆ ಪಡುವೆನು. ಆದರೆ ನನ್ನನ್ನು ಕುರಿತಂತೆ ನನ್ನ ಬಲಹೀನತೆಯನ್ನು ಕುರಿತಲ್ಲದೆ ಬೇರೆ ಹೊಗಳಿಕೆ ನನಗೆ ಇಲ್ಲ. 6ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು. 7ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು. 8ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ 9ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. 10ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.

ಪ್ರತಿವಚನ ಕೀರ್ತನೆ

ಕೀರ್ತ 34:7–12

7ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ. 8ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು. 9ಯೆಹೋವನ ಜನರೇ, ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ; ಆತನಲ್ಲಿ ಭಯಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇರುವುದಿಲ್ಲ. 10ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು; ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ. 11ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ; ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು. 12ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?

ಸುವಾರ್ತೆ

ಮತ್ತಾ 6:24–34

24“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ. 25“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. 26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? 27ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು? 28ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ; 29ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. 30ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! 31ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. 32ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. 33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. 34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು