Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 21 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಜೂನ್ 2027

ಸೋಮವಾರ · ಸಾಮಾನ್ಯ ಕಾಲದ 12ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 12ನೇ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಅಲೋಶಿಯಸ್ ಗೊನ್ಜಾಗ, ಸನ್ಯಾಸಿ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 12:1–9

1ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು. 2ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ. 3ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು. 4ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. 5ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು. 6ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. 7ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು. 8ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. 9ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.

ಪ್ರತಿವಚನ ಕೀರ್ತನೆ

ಕೀರ್ತ 33:12–13, 18–20, 22

12ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು. 13ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ; 18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.

ಸುವಾರ್ತೆ

ಮತ್ತಾ 7:1–5

1“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. 2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. 3“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ? 4ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ. 5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು