ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 21 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 8 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಜೂನ್ 2027
ಸೋಮವಾರ · ಪಂಚಾಶತ್ತಮದ ನಂತರದ ಮೊದಲನೆಯ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
ಪವಿತ್ರಾತ್ಮನ ದಿನ
ಉಪವಾಸವಿಲ್ಲದ ವಾರ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
8ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ. 9ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. 10ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. 11ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. 12ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ. 13ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ. 14ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ. 15ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. 16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ. 17ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ. 18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು, 19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
ಸುವಾರ್ತೆ
10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. 11ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು. 12“ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? 13ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ. 15“ನಿನ್ನ ಸಹೋದರನು ನಿನ್ನ ವಿರುದ್ಧ ತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ. 16ಆದರೆ ಅವನು ನಿನ್ನ ಮಾತು ಕೇಳದೇ ಹೋದರೆ ಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು. 17ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ. 18“ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 19ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. 20ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಜೂನ್ ಎಂದರೆ ನಾಗರಿಕ ಪಂಚಾಂಗದ 21 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು