Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 22 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಜೂನ್ 2027

ಮಂಗಳವಾರ · ಸಾಮಾನ್ಯ ಕಾಲದ 12ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 12ನೇ ವಾರದ ಮಂಗಳವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ನೋಲಾದ ಸಂತ ಪೌಲಿನಸ್, ಧರ್ಮಾಧ್ಯಕ್ಷ · ಐಚ್ಛಿಕ ಸ್ಮರಣೆ

ಸಂತರಾದ ಜಾನ್ ಫಿಶರ್, ಧರ್ಮಾಧ್ಯಕ್ಷ, ಮತ್ತು ಥಾಮಸ್ ಮೋರ್, ಹುತಾತ್ಮರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 13:2, 5–18

2ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು. 5ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು. 6ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು. 7ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು. 8ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ. 9ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು. 10ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು. 11ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು. 12ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು. 13ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು. 14ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು. 15ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. 16ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು. 17ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು. 18ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.

ಪ್ರತಿವಚನ ಕೀರ್ತನೆ

ಕೀರ್ತ 15:2–5

2ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. 4ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

ಸುವಾರ್ತೆ

ಮತ್ತಾ 7:6, 12–14

6“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. 12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ. 13“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ. 14ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು