Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 22 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಜೂನ್ 9 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಜೂನ್ 2027

ಮಂಗಳವಾರ · ಪಂಚಾಶತ್ತಮದ ನಂತರದ ಮೊದಲನೆಯ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

ತ್ರಿಯೇಕತ್ವದ ಹಬ್ಬದ ಮೂರನೆಯ ದಿನ

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 1:1–7, 13–17

1ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು, 2ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ; 3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. 4ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು. 5ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ. 6ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ, 7ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು. 13ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ. 14ಗ್ರೀಕರಿಗೂ ಇತರ ಜನಗಳಿಗೂ, ಜ್ಞಾನಿಗಳಿಗೂ, ಮೂಢರಿಗೂ ತೀರಿಸಬೇಕಾದ ಒಂದು ಋಣ ನನ್ನ ಮೇಲಿದೆ. 15ಹೀಗಿರುವುದರಿಂದ ರೋಮಾಪುರದಲ್ಲಿರುವ ನಿಮಗೆ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನಂತೂ ಸಿದ್ಧವಾಗಿದ್ದೇನೆ. 16ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. 17ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.

ಸುವಾರ್ತೆ

ಮತ್ತಾ 4:25–5:13

25ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. 5:1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, 3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. 4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. 6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. 7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. 8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ. 13“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಜೂನ್ ಎಂದರೆ ನಾಗರಿಕ ಪಂಚಾಂಗದ 22 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು