Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 23 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಜೂನ್ 10 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಜೂನ್ 2027

ಬುಧವಾರ · ಪಂಚಾಶತ್ತಮದ ನಂತರದ ಮೊದಲನೆಯ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Hieromartyr Timothy, Bishop of Prussa († 361-363)

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ರೋಮಾ 1:18–27

18ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ, 19ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು. 20ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. 21ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ. 22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. 23ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು. 24ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. 25ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. 26ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. 27ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.

ಸುವಾರ್ತೆ

ಮತ್ತಾ 5:20–26

20ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ. 21“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. 22ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು. 23ಆದಕಾರಣ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಹತ್ತಿರಕ್ಕೆ ತಂದಾಗ ನಿನ್ನ ಸಹೋದರನ ಮನಸ್ಸಿನಲ್ಲಿ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, 24ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು. 25“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ. 26ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಜೂನ್ ಎಂದರೆ ನಾಗರಿಕ ಪಂಚಾಂಗದ 23 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು