Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 24 ಜೂನ್

ಆರ್ಥೊಡಾಕ್ಸ್ ಪಂಚಾಂಗ · ಜೂನ್ 11 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಜೂನ್ 2027

ಗುರುವಾರ · ಪಂಚಾಶತ್ತಮದ ನಂತರದ ಮೊದಲನೆಯ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Holy Apostles Bartholomew and Barnabas (1st C)

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

1 ಪೇತ್ರ 1:3–9

3ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ, 4ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ. 5ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. 6ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. 7ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. 8ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಸಂಧ್ಯಾ ಪ್ರಾರ್ಥನೆ: ವಾಚನ

1 ಪೇತ್ರ 1:13–19

13ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ. 14ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ, 15ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 16ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ. 17ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 18ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. 19ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.

ಸಂಧ್ಯಾ ಪ್ರಾರ್ಥನೆ: ವಾಚನ

1 ಪೇತ್ರ 2:11–24

11ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು. 13ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ 14ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ. 15ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ. 16ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ. 17ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ. 18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ. 19ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. 20ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. 21ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. 22ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ. 23ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು. 24ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಯೋಹಾ 21:15–25

15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಪತ್ರಿಕೆ

ರೋಮಾ 1:28–2:9

28ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು. 29ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು. 30ಅವರು ಸುಳ್ಳುಸುದ್ದಿ ಹಬ್ಬಿಸುವವರೂ, ಚಾಡಿಹೇಳುವವರೂ, ದೇವರನ್ನು ದ್ವೇಷಿಸುವವರೂ, ಸೊಕ್ಕಿನವರೂ, ಅಹಂಕಾರಿಗಳೂ, ಬಡಾಯಿಕೊಚ್ಚುವವರೂ, ಕೇಡನ್ನು ಕಲ್ಪಿಸುವವರೂ, 31ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು. 32ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ. 2:1ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ. 2ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. 3ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ? 4ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ? 5ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ. 6ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, 7ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. 8ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. 9ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.

ಪತ್ರಿಕೆ (ಅಪೊಸ್ತಲರು)

ಅ. ಕೃ 11:19–26, 29–30

19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗಲ್ಲದೇ ಮತ್ತಾರಿಗೂ ದೇವರ ವಾಕ್ಯವನ್ನು ಹೇಳದೆ ಫೊಯಿನಿಕೆ, ಕುಪ್ರ ಹಾಗೂ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು. 20ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು. 21ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು. 22ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. 23ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು. 24ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು. 25ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. 26ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು. 29ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು. 30ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.

ಸುವಾರ್ತೆ

ಮತ್ತಾ 5:27–32

27“‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ. 28ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ. 29ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. 30ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ. 31ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. 32ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.

ಸುವಾರ್ತೆ (ಅಪೊಸ್ತಲರು)

ಲೂಕ 10:16–21

16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. 17ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು. 18ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು. 19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ. 20ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. 21ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಜೂನ್ ಎಂದರೆ ನಾಗರಿಕ ಪಂಚಾಂಗದ 24 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು