ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 25 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 12 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಜೂನ್ 2027
ಶುಕ್ರವಾರ · ಪಂಚಾಶತ್ತಮದ ನಂತರದ ಮೊದಲನೆಯ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Venerable Onuphrius the Great (4th C)
ಉಪವಾಸವಿಲ್ಲದ ವಾರ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
14ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ. 15ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ. 16ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು. 17ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ, 18ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ. 19ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ, 20ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ, 21ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು? 22ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು? 23ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ? 24“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ. 25ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು. 26ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ? 27ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ. 28ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ. 29ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.
ಸುವಾರ್ತೆ
33“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ. 34ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು. 35ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ. 36ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ. 37ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ. 38“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ. 39ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು. 40ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು. 41ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಜೂನ್ ಎಂದರೆ ನಾಗರಿಕ ಪಂಚಾಂಗದ 25 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು