Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 26 ಜೂನ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಜೂನ್ 2027

ಶನಿವಾರ · ಸಾಮಾನ್ಯ ಕಾಲದ 12ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 12ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಆದಿ 18:1–15

1ಅಬ್ರಹಾಮನು ಬಿಸಿಲೇರಿದಾಗ ಮಮ್ರೆಯ ಮೋರೆ ತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿರುವಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾದನು. 2ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ. 3“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ. 4ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ. 5ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು. 6ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು. 7ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. 8ಆಳು ಬೇಗನೆ ಕೊಬ್ಬಿದ ಕರುವನ್ನು ಕಡಿದು, ಅಡಿಗೆ ಮಾಡಿದನು. ತರುವಾಯ ಅಬ್ರಹಾಮನು ಹಾಲು ಮೊಸರನ್ನೂ ಅಡಿಗೆ ಮಾಡಿದ ಮಾಂಸವನ್ನೂ ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಕುಳಿತು ಊಟ ಮಾಡುವವರೆಗೂ ಅವನು ಹತ್ತಿರ ನಿಂತು ಅವರಿಗೆ ಉಪಚಾರ ಮಾಡಿದನು. 9ಬಳಿಕ ಅವರು ಅವನಿಗೆ, “ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ” ಎಂದು ಕೇಳಲು ಅವನು “ಅಗೋ, ಗುಡಾರದಲ್ಲಿದ್ದಾಳೆ” ಎಂದನು. 10ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು. 11ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. 12ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. 13ಯೆಹೋವನು ಅಬ್ರಹಾಮನಿಗೆ, “ಸಾರಳು ನಕ್ಕು, ಮುದುಕಿಯಾದ, ನಾನು ಮಗುವನ್ನು ಹೆರುವುದಾದೀತೇ ಎಂದು ಹೇಳಿದ್ದೇನು? 14ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು. 15ಆಗ ಸಾರಳು ಭಯಪಟ್ಟು, “ನಾನು ನಗಲಿಲ್ಲ” ಎಂದು ಸುಳ್ಳಾಡಿದಾಗ, ಆತನು ಅದಕ್ಕೆ, “ಹಾಗಲ್ಲ, ನೀನು ನಕ್ಕಿದ್ದುಂಟು” ಎಂದನು.

ಪ್ರತಿವಚನ ಕೀರ್ತನೆ

ಲೂಕ 1:47–50, 53–55

47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ. 48ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು, 49ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. 50ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು. 53ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ. 54ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.

ಸುವಾರ್ತೆ

ಮತ್ತಾ 8:5–17

5ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ ಶತಾಧಿಪತಿಯು ಆತನ ಬಳಿಗೆ ಬಂದು, 6“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು. 7ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು, 8ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 9ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು. 10ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು. 11ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು; 12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು. 13ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು. 14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ 15ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು. 16ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು. 17ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು