ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 26 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 13 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಜೂನ್ 2027
ಶನಿವಾರ · ಪಂಚಾಶತ್ತಮದ ನಂತರದ ಮೊದಲನೆಯ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ಸಮಾಪ್ತಿ
ಉಪವಾಸವಿಲ್ಲದ ವಾರ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
7ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು. 8ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ. 9ನಾನು ಪ್ರಾರ್ಥನೆ ಮಾಡುವಾಗೆಲ್ಲಾ ಎಡೆಬಿಡದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತೇನೆ. ದೇವರ ಮಗನ ಸುವಾರ್ತೆಯನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿರುವ ದೇವರೇ ನನಗೆ ಸಾಕ್ಷಿ. 10ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. 11ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ಸುವಾರ್ತೆ
42ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ. 43“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. 46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ. 47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ. 48ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಜೂನ್ ಎಂದರೆ ನಾಗರಿಕ ಪಂಚಾಂಗದ 26 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು