ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 27 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 14 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಜೂನ್ 2027
ಭಾನುವಾರ · ಸ್ವರ 8
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ ಮೊದಲನೆಯ ಭಾನುವಾರ
ಎಲ್ಲಾ ಸಂತರ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
9ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ. 10ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. 11ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ. 12ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ; ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು. 13ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು. 14ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಮೊದಲನೆಯ ಸುವಾರ್ತೆ
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಪತ್ರಿಕೆ
33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., 34ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. 36ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. 37ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. 38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. 39ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. 40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು. 12:1ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ಸುವಾರ್ತೆ
ಮತ್ತಾ 10:32–33, 37–38; 19:27–30
32“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. 33ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. 37ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. 38ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. 19:27ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು. 28ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. 29ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. 30ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಜೂನ್ ಎಂದರೆ ನಾಗರಿಕ ಪಂಚಾಂಗದ 27 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು