ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 28 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 15 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಜೂನ್ 2027
ಸೋಮವಾರ · ಪಂಚಾಶತ್ತಮದ ನಂತರದ ಎರಡನೆಯ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Holy Prophet Amos (8th C BC)
ಅಪೊಸ್ತಲರ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
28ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ. 29ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ. 3:1ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು? 2ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ. 3ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ. 4ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. 5ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ. 6ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ? 7ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ? 8“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು. 9ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ. 10ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; 11ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ. 12ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. 13ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ. 14ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ. 15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ. 16ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ. 17ಸಮಾಧಾನದ ಮಾರ್ಗವನ್ನೇ ಅರಿಯರು. 18ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
ಸುವಾರ್ತೆ
31ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. 32ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. 33ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. 34ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು. 7:9“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? 10ಮೀನು ಕೇಳಿದರೆ ಹಾವನ್ನು ಕೊಡುವನೋ? 11ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಜೂನ್ ಎಂದರೆ ನಾಗರಿಕ ಪಂಚಾಂಗದ 28 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು