ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜೂನ್ 2027 › 29 ಜೂನ್
ಆರ್ಥೊಡಾಕ್ಸ್ ಪಂಚಾಂಗ · ಜೂನ್ 16 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 29 ಜೂನ್ 2027
ಮಂಗಳವಾರ · ಪಂಚಾಶತ್ತಮದ ನಂತರದ ಎರಡನೆಯ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Saint Tikhon, Bishop of Amathus († 425)
ಅಪೊಸ್ತಲರ ಉಪವಾಸ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
4ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು. 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು. 6ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ, 7“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು. 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.” 9ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ. 10ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು. 11ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು. 12ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
ಸುವಾರ್ತೆ
15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ. 16ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ? 17ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; 18ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. 19ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. 20ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ. 21“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 16 ಜೂನ್ ಎಂದರೆ ನಾಗರಿಕ ಪಂಚಾಂಗದ 29 ಜೂನ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು